20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’?: ಸಿದ್ದರಾಮಯ್ಯ

ಬೆಂಗಳೂರು: ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೊರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ನಿಂದ ಯಾವುದೇ ಲಾಭವಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್ ಬೋಗಸ್ ಪ್ಯಾಕೇಜ್. ಪ್ಯಾಕೇಜ್‌ನ ಒಂದು ರೂಪಾಯಿ ಕೂಡ ಯಾರಿಗೂ ತಲುಪಿಲ್ಲ. ಒಬ್ಬ ಫಲಾನುಭವಿಗೂ ಒಂದು ಸಾವಿರ ರೂ. ಕೊಟ್ಟಿಲ್ಲ. ಬಜೆಟ್‌ನಲ್ಲಿರುವ ಯೋಜನೆಗಳನ್ನು ತಿರುಚಿ ಶಹಬ್ಬಾಶ್‌ಗಿರಿ ತೆಗೆದುಕೊಳ್ಳುವ ಪ್ರಯತ್ನವನ್ನು ಮೋದಿ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಜನಹಿತ ಕಾಪಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದರು.

Leave a Reply

Your email address will not be published. Required fields are marked *

error: Content is protected !!