ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸುಧಾಕರ್
ಬೆಂಗಳೂರು: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ತಪಾಸಣೆ ಚಿಕಿತ್ಸೆ ಸಾಕಾಗುವುದಿಲ್ಲ, ಹಾಗೆಂದು ನಾಗರಿಕರು ಆತಂಕಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ವಹಿಸಿ ಸರ್ಕಾರ ಹೋಂ ಐಸೊಲೇಷನ್ ಗೆ ಸದ್ಯದಲ್ಲಿಯೇ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.
ಆಂಬ್ಯುಲೆನ್ಸ್ ವ್ಯವಸ್ಥೆ; ಕೊರೋನಾ ರೋಗಿಗಳನ್ನು ಸಮಯಕ್ಕೆ ಸರಿಯಾಗಿ ಕರೆದುಕೊಡು ಹೋಗಲು,ಬೆಂಗಳೂರಿನಲ್ಲಿ ಕೆಲವು ಕಡೆ ಸಮಯಕ್ಕೆ ಸರಿಯಾಗಿ ಅಂಬುಲನ್ಸ್ ಲಭ್ಯವಾಗದೆ ಉಂಟಾಗಿರುವ ಗೊಂದಲವನ್ನು ನಿವಾರಿಸಲು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಂಬುಲನ್ಸ್ ಹೊರತುಪಡಿಸಿ ಹೆಚ್ಚುವರಿಯಾಗಿ ಪ್ರತೀ ವಾರ್ಡ್ಗ್ ಗೆ 2 ರಂತೆ 400 ಅಂಬುಲನ್ಸ್ ನಿಯೋಜಿಸಲಾಗಿದೆ ಎಂದು ಸಹ ಸಚಿವ ಸುಧಾಕರ್ ತಿಳಿಸಿದ್ದಾರೆ. ಇದಕ್ಕೆ ಪ್ರತ್ಯೇಕ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.