ಉಡುಪಿ: 130 ಮಂದಿಯಲ್ಲಿ ಕೋವಿಡ್ ಸೋಂಕು- ಕುಂದಾಪುರದ ವ್ಯಕ್ತಿಯ ಸಾವು

ಉಡುಪಿ ಆ.11 (ಉಡುಪಿ ಟೈಮ್ಸ್ ವರದಿ): ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಜಿಲ್ಲೆಯ ಕೋವಿಡ್ ಅಂಕಿ ಅಂಶಗಳು ಈ ರೀತಿ ಇದೆ.

ಜಿಲ್ಲೆಯಲ್ಲಿ ಇಂದು 130 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 63, ಕುಂದಾಪುರ 36, ಕಾರ್ಕಳ 30 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1205 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಕುಂದಾಪುರದ 72 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 240 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆ.10 ರಂದು ಜಿಲ್ಲೆಯಲ್ಲಿ 166 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 46,110 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 71,166  ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 69,531 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ  ಆ.10 ರ ವೇಳೆಗೆ ಜಿಲ್ಲೆಯಲ್ಲಿ 4,61,654 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 47,555 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.

ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 5, ಕಾರ್ಕಳದಲ್ಲಿ 6 ಹಾಗೂ ಹೊರ ಜಿಲ್ಲೆಯ 39 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ  38 ಮಂದಿ  ಸೋಂಕಿನಿಂದ  ಗುಣ  ಮುಖರಾಗಿದ್ದು, 5 ಮಂದಿ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 50 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!