ಸಮಾರಂಭಗಳಲ್ಲಿ ಹೂಗುಚ್ಛ, ನೆನಪಿನ ಕಾಣಿಕೆ ನಿಷೇಧ- ಪುಷ್ಪ ಬೆಳೆಗಾರರ ಸಂಘ ಆ.12 ರಂದು ಪ್ರತಿಭಟನೆ

ಬೆಂಗಳೂರು ಆ.11: ಸರ್ಕಾರದ ಸಮಾರಂಭಗಳಲ್ಲಿ ಹೂಗುಚ್ಛ, ನೆನಪಿನ ಕಾಣಿಕೆ ನೀಡುವುದನ್ನು ನಿಷೇಧ ಮಾಡಿರುವ ಸರಕಾರದ ಕ್ರಮವನ್ನು ವಿರೋಧಿಸಿ ವಿವಿಧ ಪುಷ್ಪ ಬೆಳೆಗಾರರ ಸಂಘಟನೆಗಳು ನಾಳೆ ಆ.12 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಸರಕಾರದ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ  ಬೆಳಿಗ್ಗೆ 11.15 ಕ್ಕೆ ಪ್ರತಿಭಟನೆ ಆರಂಭವಾಗಲಿದ್ದು,ರಾಜ್ಯದ ಹೂ ಬೆಳೆಗಾರರು ಹಾಗೂ ರೈತರು ಮತ್ತು ಮಾರಾಟಗಾರರು ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌, ನಿರ್ದೇಶಕರಾದ ಶ್ರೀಕಾಂತ್‌ ಬೆಲ್ಲಂಪಳ್ಳಿ, ರಾಜ್ಯದ ಎಲ್ಲಾ ಹೂ ಬೆಳೆಗಾರರರು, ಪುಷ್ಟ ಕೃಷಿ ರೈತ ಸಂಘಟನೆಗಳು ಮತ್ತು ರಾಜ್ಯದ ಎಲ್ಲಾ ಪುಷ್ಟ ಮಾರಾಟಗಾರರು ಮತ್ತು ಸಂಘದ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮೇಲೆ ಮಾಡಿದ ಗಧಾಪ್ರಹಾರ ವಾಗಿದೆ ಎಂದು ಸಂಘಟನೆಗಳು ಅಭಿಪ್ರಾಯ ವ್ಯಕ್ತಪಡಿಸಿದೆ.

 .

Leave a Reply

Your email address will not be published. Required fields are marked *

error: Content is protected !!