| ಉಡುಪಿ ಆ.11(ಉಡುಪಿ ಟೈಮ್ಸ್ ವರದಿ): ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮಸ್ಯೆಗಳ ಕುರಿತು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆಸ್ಪತ್ರೆಯಲ್ಲಿ ಕೈಗೊಳ್ಳುವ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.
ಬಳಿಕ ಮಾತನಾಡಿದ ಶಾಸಕ ರಘುಪತಿ ಭಟ್ ಅವರು, ಜಿಲ್ಲಾಸ್ಪತ್ರೆಗೆ ಆಯುಷ್ಮಾನ್ ಯೋಜನೆಯ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ 50 ಲಕ್ಷ ರೂ ಬಿಡುಗಡೆಯಾಗಿದ್ದು, ಈ ಮೊತ್ತವನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳಿಗೆ ವೇತನ ನೀಡಲು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತರಾದ ಕೆ. ವಿ. ತ್ರಿಲೋಕ್ ಚಂದ್ರ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಧುಸೂದನ್ ನಾಯಕ್ ಉಪಸ್ಥಿತರಿದ್ದರು. | |