ಸ್ವಾತಂತ್ರ್ಯ ಅಮೃತ ಮಹೋತ್ಸವ: ಆ.14 ರಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಪಾದಯಾತ್ರೆ
ಉಡುಪಿ: ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳಾಗುತ್ತಿರುವ ಈ ಸುಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ಆ.14 ರಂದು ಸಂಜೆ ಉಡುಪಿ ಕಾಂಗ್ರೆಸ್ ಭವನದಿಂದ ಸರ್ವಿಸ್ ಬಸ್ ಸ್ಟ್ಯಾಂಡ್ ಗಾಂಧಿ ಚೌಕದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಕಾಂಗ್ರೆಸ್ ಭವನದಲ್ಲಿ ಜರಗಿದ ಜಿಲ್ಲಾ ಕಾಂಗ್ರೆಸ್ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರುಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಸ್ವಾತಂತ್ರ್ಯ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಜನತೆ ನೆನಪಿಸಿ ಕೊಳ್ಳುವಂತಾಗ ಬೇಕು. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷಪೂರ್ತಿ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಆಚರಿಸಲು ನಿರ್ಧರಿಸಲಾಯಿತು. ಮಹಾನ್ ನಾಯಕರ ತ್ಯಾಗ ಬಲಿದಾನದ ಮೇಲೆ ನಮಗೆ ದೊರಕಿರುವ ಈ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ಉಳಿಸಬೇಕಾದ ಹೊಣೆ ನಮ್ಮದು.ಇಂದು ಸರಕಾರದ ನಡೆ ಜನವಿರೋಧಿಯಾದಾಗ ಅದನ್ನು ವಿರೋಧಿಸಿದವರನ್ನು ವ್ಯವಸ್ಥೆಯು ದೇಶದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ. ಸರಕಾರಗಳ ಈ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ ಈ ಹಿನ್ನಲೆಯಲ್ಲಿ ಯುವ ಪೀಳಿಗೆಗೆ ಸ್ವಾತಂತ್ರ್ಯ ಚಳುವಳಿಯ ಮಹತ್ವ ಹಾಗೂ ಪ್ರಜಾಪ್ರಭುತ್ವ ಸ್ಥಾಪನೆಯ ಇತಿಹಾಸದ ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದರು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಮಂಜುನಾಥ ಪೂಜಾರಿ, ದಿನಕರ್ ಹೇರೂರು, ಸತೀಶ್ ಅಮೀನ್ ಪಡುಕೆರೆ, ನವೀನ್‌ಚಂದ್ರ ಸುವರ್ಣ, ಪ್ರವೀಣ್ ಶೆಟ್ಟಿ, ಸದಾಶಿವ ದೇವಾಡಿಗ, ಹರಿಪ್ರಸಾದ್ ಶೆಟ್ಟಿ, ಪಕ್ಷದ ಮುಖಂಡರಾದ ನೀರೆ ಕೃಷ್ಣ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಬಿ. ಕುಶಲ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ದಿವಾಕರ್ ಕುಂದರ್, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರಾ, ಸಂಕಪ್ಪ ಎ., ಹರೀಶ್ ಶೆಟ್ಟಿ ಪಾಂಗಾಳ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಬಾಲಕೃಷ್ಣ ಪೂಜಾರಿ, ಕಿಶೋರ್ ಕುಮಾರ್ ಎರ್ಮಾಳ್, ಡೆರಿಕ್ ಡಿ’ಸೋಜಾ, ಅಖಿಲೇಶ್ ಕೋಟ್ಯಾನ್, ರೋಶನ್ ಶೆಟ್ಟಿ, ಶೇಖರ್ ಪೂಜಾರಿ ಬೈಂದೂರು, ಉದ್ಯಾವರ ನಾಗೇಶ್ ಕುಮಾರ್, ಹರಿಶ್ಚಂದ್ರ ಕೊಡವೂರು, ಪ್ರಶಾಂತ್ ಜತ್ತನ್ನ, ಮಾಧವ ಬನ್ನಂಜೆ, ಪ್ರಶಾಂತ್ ಜತ್ತನ್ನ, ಸದಾಶಿವ ಅಮೀನ್ ಕಟ್ಟೆಗುಡ್ಡೆ, ಪ್ರಕಾಶ್ ಜಿ. ಕೊಡವೂರು, ಹಮದ್, ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಶೇರಿಗಾರ್ ಧನ್ಯವಾದವಿತ್ತರು.