ಮೊಹರಂ, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಆಗಸ್ಟ್  ಮತ್ತು ಸೆಪ್ಟೆಂಬರ್  ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತಿತರ  ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ. 

ಮೊಹರಂ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ,  ದುರ್ಗಾ ಪೂಜೆ ಮೊದಲಾದ ಹಬ್ಬ ಆಚರಣೆ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ ಸಲಹೆ ನೀಡಲಾಗಿದೆ. ಸಾಮಾಜಿಕ, ರಾಜಕೀಯ, ಕ್ರೀಡಾ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ  ಬೃಹತ್  ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಪೂಜಾ ಸ್ಥಳಗಳು ಮತ್ತಿತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಮತ್ತು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಪೂಜಾ ಕಾರ್ಯ ಕೈಗೊಳ್ಳಲು ಅನುಮತಿಸಿದೆ ಆದರೆ, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ, ಸಭೆ, ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ. ಅಗತ್ಯವಿದ್ದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಸ್ಥಳೀಯ ನಿರ್ಬಂಧಗಳನ್ನು ವಿಧಿಸುವಂತೆ  ಆದೇಶಿಸಲಾಗಿದೆ.

ಈ ಮಾರ್ಗಸೂಚಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು  ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ  ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51ರಿಂದ 60ರ ಅನ್ವಯ ಹಾಗೂ ಭಾರತ ದಂಡ ಸಂಹಿತೆ 188ನೇ ಪ್ರಕರಣದಡಿ ಕಾನೂನು ಕ್ರಮ ಕೈಗೊಳ್ಳತಕ್ಕದ್ದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!