ಉಡುಪಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರವೇ ನಿರ್ವಹಿಸಲಿದೆ-ಬಸವರಾಜ ಬೊಮ್ಮಾಯಿ

ಉಡುಪಿ ಆ.12(ಉಡುಪಿ ಟೈಮ್ಸ್ ವರದಿ): ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರವೇ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರು ಭರವಸೆ ನೀಡಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯ ನಿರ್ವಹಣೆಗೆ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಸರಕಾರ ನಿರ್ವಹಣೆ ನಡೆಸಲು ಒಪ್ಪಿಗೆ ಸೂಚಿಸಲಾಗಿದೆ. ಈ ಬಗ್ಗೆ ಮುಂದಿನ ವಾರದಲ್ಲಿ ಸೂಕ್ತ ಆದೇಶ ಹೊರಡಿಸಿ ಸರಕಾರವೇ ಆಸ್ಪತ್ರೆಯನ್ನು ನಿರ್ವಹಿಸಲಿದೆ ಎಂದು ತಿಳಿಸಿದರು.

ಆಸ್ಪತ್ರೆಯನ್ನು ನಿರಂತರ ಈ ಭಾಗದ ಜನರ ಸೇವೆಗೆ ಅನುವು ಮಾಡಿಕೊಡುವುದಾಗಿ ತಿಳಿಸಿದ ಅವರು, ಪಿಪಿಪಿ ಮಾದರಿಯಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಈ ಪೈಕಿ ಯೋಜನೆಯ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯೂ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಷ್ಟೇ ಸಮಸ್ಯೆಗಳು ಬಂದರೂ ನಾಡು ಕಟ್ಟುವ ಕೆಲಸ ಮಾಡುತ್ತೇನೆ ಎಂದ ಅವರು, ಆಸ್ಪತ್ರೆಯಲ್ಲಿ ಹೆಚ್ಚುವರಿ ಬೆಡ್ ಗಳನ್ನು ಹೆಚ್ಚಿಸಲಾಗಿದೆ. ಡ್ರಗ್ ಮಟ್ರೋಲ್ ವ್ಯವಸ್ಥೆ ಯನ್ನು ಅತ್ಯಂತ ದಕ್ಷತೆಯಿಂದ ಕೆಲಸಮಾಡುವ ವ್ಯವಸ್ಥೆ ಗೆ ಅಳವಡಿಸಲಾಗಿದೆ.
ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನೇಷನ್‌ ಆರಂಭಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದ ಅವರು, ಉಡುಪಿಗೆ ಸರಕಾರಿ ಮೆಡಿಕಲ್ ಕಾಲೇಜು ನೀಡುವ ಬಗ್ಗೆ ಆಕ್ಸಿಜನ್ ಸಮಸ್ಯೆ ಎದುರಿಸಿದರೂ ಉಡುಪಿಗೆ ಆಕ್ಸಿಜನ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!