ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಅಂಗಾಂಗ ದಾನಕ್ಕೆ ನಿರ್ಧಾರ
ಉಡುಪಿ ಆ.13(ಉಡುಪಿ ಟೈಮ್ಸ್ ವರದಿ): ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಂಗಾಂಗ ದಾನ ಮಾಡುವ ಮೂಲಕ ಸಾವಿರಾರು ಜನರ ಜೀವ ಉಳಿಸಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಜನರಿಗೆ ಅಂಗಾಂಗ ದಾನಕ್ಕೆ ಮುಂದಾಗುವಂತೆ ಕರೆ ನೀಡಿದ್ದಾರೆ.
ಈ ಬಗ್ಗೆ ಇಂದು ಉಡುಪಿಯಲ್ಲಿ ಮಾತನಾಡಿದ ಅವರು, ದೇಹದ ಅಂಗಾಂಗಳನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮೂಲಕ ಕಸಿ ಮಾಡುವ ತಂತ್ರಜ್ಞಾನ ಅಭಿವೃದ್ಧಿಗೊಂಡಿದ್ದು, ಇದರಿಂದ ಬಹಳಷ್ಟು ಜೀವಗಳನ್ನು ಉಳಿಸಬಹುದು ಎಂದಿದ್ದಾರೆ. ಇದೇ ವೇಳೆ ತಾನು ಸ್ವತಃ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದು, ವರ್ಲ್ಡ್ಸ್ ಆರ್ಗನ ಡೊನೇಶನ್ ಡೇ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನ ಮಾಡುವ ಸಂಕಲ್ಪ ಮಾಡಬೇಕು. ಈ ಮೂಲಕ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದೆ ಬಂದರೆ ಸಾವೀರಾರು ಜೀವಗಳನ್ನು ಉಳಿಸಬಹುದಾಗಿದೆ ಎಂದರೆ.
ಇದೇ ವೇಳೆ, ಕೋವಿಡ್ ಭೀತಿ ನಡುವೆ ಶಾಲೆಗಳ ಆರಂಭದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ತಜ್ಞರು ನೀಡಿದ ವರದಿಯಂತೆ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ತಜ್ಞರು ಈ ಕುರಿತು ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ತಜ್ಞರು ನೀಡುವ ಸಲಹೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.