ಬಿಜೆಪಿ ಜೊತೆಗೆ ಟ್ವಿಟ್ಟರ್ ಕೈಜೋಡಿಸಿ ಪ್ರಜಾತಂತ್ರವನ್ನು ಹತ್ತಿಕ್ಕುವ ಕೃತ್ಯ- ಪ್ರಿಯಾಂಕಾ ಗಾಂಧಿ

ನವದೆಹಲಿ ಆ.13: ಬಿಜೆಪಿ ಜೊತೆಗೆ ಟ್ವಿಟ್ಟರ್ ಕೈಜೋಡಿಸಿ ಪ್ರಜಾತಂತ್ರವನ್ನು ಹತ್ತಿಕ್ಕುವ ಕೃತ್ಯದಲ್ಲಿ ತೊಡಗಿದೆ‌ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನ ಕೆಲ ಮುಖಂಡರ ಟ್ವಿಟ್ಟರ್  ಖಾತೆಗಳನ್ನು ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆಗಳನ್ನು ಅಮಾನತು ಮಾಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ಟ್ವಿಟ್ಟರ್ ತನ್ನದೇ ನಿಯಮ ಪಾಲಿಸುತ್ತಿದೆಯಾ? ಅಥವಾ ಮೋದಿ ಸರ್ಕಾರದ ನೀತಿ ಅನುಸರಿಸುತ್ತಿದೆಯಾ ಎಂದು ಪ್ರಶ್ನಿಸಿ ಬಿಜೆಪಿ ಜೊತೆಗೆ ಟ್ವಿಟ್ಟರ್  ಕೈಜೋಡಿಸಿ ಪ್ರಜಾತಂತ್ರವನ್ನು ಹತ್ತಿಕ್ಕುವ ಕೃತ್ಯದಲ್ಲಿ ತೊಡಗಿದೆ‌ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್ ಖಾತೆ ಸಸ್ಪೆಂಡ್ ಬೆನ್ನಲ್ಲೇ ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಖಾತೆಯೂ ಲಾಕ್ ಆಗಿದೆ. ಇದರ ಜೊತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ, ಕೆ ಸಿ ವೇಣುಗೋಪಾಲ್, ಅಜಯ್ ಮಕೇನ್, ಪಕ್ಷದ ಸಚೇತಕ ಮಣಿಕ್ಕಮ್ ಠಾಕೋರ್, ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಮತ್ತು ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಟ್ವಿಟ್ಟರ್ ಖಾತೆಗಳನ್ನು ಸಹ ಬ್ಲಾಕ್ ಮಾಡಲಾಗಿದೆ. ಹೀಗೆಂದು ತನ್ನ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಟ್ವಿಟ್ಟರ್ ಸಂಸ್ಥೆ ವಿರುದ್ಧವಾಗಿ ಕೆಂಡಕಾರಿದೆ.

ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿ ಮನೆಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಈ ಕುರಿತು ಬಾಲಕಿಯ ಪೋಷಕರ ಜೊತೆಗಿನ ಚಿತ್ರ ಹಂಚಿಕೊಂಡು ಟ್ವೀಟ್ ಮಾಡಿದ್ದರು. ಇದರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಟ್ವಿಟ್ಟರ್ ಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯ ಕುರಿತು ಮಾಹಿತಿ ನೀಡಿ ಫೋಕ್ಸೋ ಕಾಯ್ದೆ ಉಲ್ಲಂಘಿಸಿ ಟ್ವೀಟ್ ಮಾಡಿದ್ದಾರೆ ರಾಹುಲ್ ಗಾಂಧಿ ಖಾತೆಯನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಟ್ವಿಟ್ಟರ್ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!