ಕಾಬೂಲ್: ತಾಲಿಬಾನ್’ಗಳ ದಾಳಿ-ವಿಮಾನ ಹತ್ತಲು ಮುಗಿಬಿದ್ದ ಅಫ್ಘಾನಿಸ್ತಾನದ ಜನ

ಕಾಬೂಲ್ ಆ.16 : ತಾಲಿಬಾನ್ ಗಳ ದಾಳಿಗೆ ಬೆದರಿದ ಅಫ್ಘಾನಿಸ್ತಾನದ ಜನರು ದೇಶ ತೊರೆಯಲು ಮುಂದಾಗಿದ್ದಾರೆ.

 ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ  ದೇಶ ತೊರೆಯಲು ಜನರು ಆರಂಭಿಸಿದ್ದು ಕಾಬೂಲ್ ವಿಮಾನ ನಿಲ್ದಾಣದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ವಿಮಾನ ಹತ್ತಲು ಮುಗಿಬಿದ್ದಿದ್ದ ದೃಶ್ಯ ಕಂಡು ಬಂದಿದೆ.
ಸಾಮಾನ್ಯವಾಗಿ ವಿಮಾನ ನಿಲ್ದಾಣಗಳಲ್ಲಿ ವಿಮಾನ ಹತ್ತಲು ನಿಯಮಗಳು ಇರುತ್ತದೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಿಮಾನ ಹತ್ತಲು ಅನುಮತಿ ನೀಡಲಾಗುತ್ತದೆ.  ಆದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಗ್ರರಿಂದ ಪ್ರಾಣ ಉಳಿದರೆ ಸಾಕು ಎಂದು ವಿಮಾನ ನಿಲ್ದಾಣಕ್ಕೆ ಜನರು ನುಗ್ಗಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೆ ಬಸ್ ಹತ್ತಲು ಪ್ರಯಾಣಿಕರು ಹೇಗೆ ಮುಗಿಬೀಳುತ್ತಾರೋ ಆ ರೀತಿಯಾಗಿ ಒಂದು ಏಣಿ ಮೂಲಕ ವಿಮಾನ ಹತ್ತಲು ಯತ್ನಿಸುತ್ತಿರುವುದು ಕಂಡುಬಂದಿದೆ.

Leave a Reply

Your email address will not be published. Required fields are marked *

error: Content is protected !!