ಕೋವಿಡ್ ಮತ್ತು ಬ್ಲ್ಯಾಕ್ ಫಂಗಸ್’ಗೆ ಹೆದರಿ ಪಡುಬಿದ್ರಿಯ ದಂಪತಿ ಆತ್ಮಹತ್ಯೆ!

ಮಂಗಳೂರು: ಕೋವಿಡ್-19 ಸೋಂಕು ಮತ್ತು ಬ್ಲ್ಯಾಕ್ ಫಂಗಸ್ ಗೆ ಹೆದರಿ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುಳಾಯಿ ಚಿತ್ರಾಪುರಯಲ್ಲಿ ನಡೆದಿದೆ.

ಮೃತರನ್ನು ಪಡುಬಿದ್ರಿ ನಿವಾಸಿ ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಎಂದು ಗುರುತಿಸಲಾಗಿದೆ. ಕೋವಿಡ್-19 ಸೋಂಕು ಮತ್ತು ಬ್ಲ್ಯಾಕ್ ಫಂಗಸ್ ಗೆ ಹೆದರಿ ಮೊದಲು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಧುಮೇಹ ಕಾಯಿಲೆ ಹತೋಟಿಗೆ ಬಾರದೆ ಗುಣವತಿ ಜೀವನದಲ್ಲಿ ಬಹಳ ನೊಂದಿದ್ದರು. 2020ರ ಬಳಿಕ ಕೋವಿಡ್ ಬಂದ ಬಳಿಕ ನಾವೆಲ್ಲ ತುಂಬಾ ಜಾಗರೂಕತೆ ತೆಗೆದುಕೊಂಡಿದ್ದೆವು. ಆದರೆ ಸುಮಾರು 10 ದಿನಗಳಿಂದ ಕೋವಿಡ್ ಮತ್ತೆ ಬಾಧಿಸಿತ್ತು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿತ್ತು. ಗಂಡನಿಗೂ 3 ದಿನದಿಂದ ಕೋವಿಡ್ ಲಕ್ಷಣಗಳು ಕಂಡು ಬರುತ್ತಿದೆ. ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಬರೆದಿದ್ದಾರೆ.

ನನ್ನ ತಂದೆ, ತಾಯಿ ಹಾಗೂ ತಮ್ಮನಿಗೂ ಕೋವಿಡ್ ಸೋಂಕು ತಗುಲಿದ್ದು, ಚೇತರಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ನಮ್ಮ ಅಂತ್ಯಕ್ರಿಯೆ ತೊಂದರೆಯನ್ನು ಕೊಡಬಾರದು. ನನಗೆ 2 ಬಾರಿ ಸಿಝೇರಿಯನ್ ಆಗಿ ಮಕ್ಕಳ ಸಮಸ್ಯೆಯಾದರೂ ಎಲ್ಲಿ ಹೋದರೂ ಮಕ್ಕಳ ಬಗ್ಗೆಯೇ ಕೇಳುತ್ತಿದ್ದಾರೆ. ಅದಕ್ಕಾಗಿ ನಾನು ಹೆಚ್ಚು ಯಾರ ಜತೆನೂ ಬೆರೆಯುತ್ತಿರಲಿಲ್ಲ. ಹಿಂದೂ ಸಂಘಟನೆಯ ಶರಣ್ ಪಂಪ್‌ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರಲ್ಲಿ ವಿನಂತಿ ಮಾಡುವುದೇನೆಂದರೆ ನಮ್ಮನ್ನು ನಮ್ಮ ಹಿಂದೂ ಸಂಪ್ರದಾಯ ಪ್ರಕಾರ ಅಂತ್ಯಸಂಸ್ಕಾರ ನಡೆಸಿ. ಅಂತ್ಯಕ್ರಿಯೆಯ 1ಲಕ್ಷ ರೂ. ಇಟ್ಟಿದ್ದೇವೆ. ನಮ್ಮ ಮನೆಯಲ್ಲಿರುವ ವಸ್ತುಗಳನ್ನು ಬಡವರಿಗೆ ನೀಡಿ. ಈ ಮನೆಯ ಮಾಲೀಕರಲ್ಲೂ ಕ್ಷಮೆ ಕೇಳುತ್ತೇವೆ’ ಎಂದು ಬರೆದಿದ್ದಾರೆ.

ಆತ್ಮಹತ್ಯೆಗೆ ಮುನ್ನ ಆರ್ಯ ಸುವರ್ಣ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್‌ಗೆ ವಾಯ್ಸ್ ಮೆಸೇಜ್ ಕಳಿಸಿದ್ದು, ‘ದಂಪತಿಗಳಾದ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದರು. ಇದಕ್ಕೆ ಕಮಿಷನರ್ ಕೂಡಲೇ ಪ್ರತಿಕ್ರಿಯೆ ನೀಡಿ ‘ಆತ್ಮಹತ್ಯೆಯಂತ ದುಸ್ಸಾಹಸ ಮಾಡಬೇಡಿ. ನಿಮ್ಮ ಏನೇ ಕಷ್ಟವಿದ್ದರೂ ನಾನು ಸ್ಪಂದಿಸುತ್ತೇನೆ. ದಯವಿಟ್ಟು ಆತ್ಮಹತ್ಯೆ ಮಾಡಬೇಡಿ’ ಎಂದು ವಿನಂತಿ ಮಾಡಿದ್ದಾರೆ. ಕೂಡಲೇ ಎಲ್ಲ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿ ದಂಪತಿ ರಕ್ಷಣೆಗೆ ಆಗ್ರಹಿಸಿದ್ದಾರೆ. ದಂಪತಿ ಮಾಹಿತಿ ಪಡೆದ ಸುರತ್ಕಲ್ ಪೊಲೀಸರು ಅಪಾರ್ಟ್‌ಮೆಂಟ್‌ಗೆ ಹೋದಾಗ ದಂಪತಿ ಆತ್ಮಹತ್ಯೆಗೈದಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

error: Content is protected !!