ಮಂಗಳೂರಿನಲ್ಲಿ ಜು.8 ರಿಂದ ಮತ್ತೆ ಲಾಕ್‌ಡೌನ್: ಸುಳ್ಳು ಸುದ್ದಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಜುಲೈ 8ರಿಂದ 25ರ ವರೆಗೆ ಸ್ವಯಂಪ್ರೇರಿತ ಲಾಕ್‌ಡೌನ್‌ ಇರಲಿದೆ ಎಂಬ ಸುಳ್ಳು ಸುದ್ದಿ ಹರಿದಾಡಿದ್ದು ಅಂತಹ ಯಾವುದೇ ಪ್ರಸ್ತಾಪ ಇರುವುದಿಲ್ಲ. ಜುಲೈ 08 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ಜಿಲ್ಲೆಯ ವಿವಿಧ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ಜಿಲ್ಲೆಯ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಆಟೋ ರಿಕ್ಷಾ ಕ್ಯಾಬ್ , ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಲಭ್ಯವಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದ್ದು ಜಿಲ್ಲೆಯ ಜನತೆ , ವ್ಯಾಪಾರಸ್ಥರು , ಬಸ್ ಮಾಲಕರು , ಆಟೋ ರಿಕ್ಷಾ ಚಾಲಕರು , ಅಂಗಡಿಗಳ ಮಾಲಕರು ಹಾಗೂ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತ ಲಾಕ್ಡೌನ್ ಬೆಂಬಲಿಸಿ ಕರೊನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಲು ಕೋರಲಾಗಿದೆ ಎನ್ನುವ ಮೆಸೇಜ್‌ ವಾಟ್ಸಾಪ್‌ನಲ್ಲಿ ಸೋಮವಾರ ಬೆಳಗ್ಗಿನಿಂದಲೇ ಹರಿದಾಡಿತ್ತು.

ಜಿಲ್ಲೆಯಲ್ಲಿ ಲಾಕ್ ಡೌನ್ ಎಂದಿನಂತೆ ಪ್ರತೀದಿನ ರಾತ್ರಿ 8 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಹಾಗೂ ಭಾನುವಾರ ಇಡೀ ದಿನ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸ್ಪಷ್ಟಪಡಿಸಿದ್ದಾರೆ.

ಅಂತಹ ಯಾವ ಸಭೆಯೂ ಆಗಿಲ್ಲ, ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ದ.ಕ ಜಿಲ್ಲಾ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಕೂಡ ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!