ಉಡುಪಿ: 122 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- ಕುಂದಾಪುರದ ವ್ಯಕ್ತಿಯ ಸಾವು

ಉಡುಪಿ ಆ.17(ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ. 

ಜಿಲ್ಲೆಯಲ್ಲಿ ಇಂದು 122 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 63, ಕುಂದಾಪುರ 32, ಕಾರ್ಕಳ 25 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,329 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಕುಂದಾಪುರ 88 ವರ್ಷದ ವ್ಯಕ್ತಿ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 244 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಆ.16 ರಂದು ಜಿಲ್ಲೆಯಲ್ಲಿ 122 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!