ಶಿರ್ವ: ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ

ಶಿರ್ವ:  ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಇಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ ಸರ್ಕಾರದ ಆದೇಶದಂತೆ  ಸರಳವಾಗಿ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ರಾಜ್ಯದ ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಸದ್ಭಾವನಾ  ದಿನವನ್ನು ಆಚರಿಸಲಾಗುತ್ತದೆ.

ಆದರೆ ಈ ವರ್ಷ ಆ. 20ರಂದು ಮೊಹರಂ ಹಬ್ಬದ ಪ್ರಯುಕ್ತ ಎಲ್ಲ ಸರ್ಕಾರಿ ಕಚೇರಿಗಳ ರಜೆಯ ಕಾರಣ ಈ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು ಎಂದರು .

ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಕು. ಯಶೋದ,ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್‌ಕುಮಾರ್‌,ಎನ್ಎಸ್ಎಸ್ ಯೋಜನಾಧಿಕಾರಿ ಪ್ರೇಮನಾಥ್, ಕು.ರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ,ಕಾಲೇಜಿನ ವಿದ್ಯಾರ್ಥಿಗಳು,ಎಲ್ಲಾ ಭೋಧಕ ಹಾಗು ಭೋಧಕೆತರ ವೃಂದದವರು ಉಪಸ್ಥಿತರಿದ್ದರು.  

Leave a Reply

Your email address will not be published. Required fields are marked *

error: Content is protected !!