6 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಅನುಮತಿ- ಸಾರ್ವಜನಿಕ ಗಣೇಶೋತ್ಸವ ಆಚರಣೆ ಬಗ್ಗೆ ಯಾವುದೇ ನಿರ್ಧಾರ ಇಲ್ಲ!
ಬೆಂಗಳೂರು: ಮೂರನೇ ಅಲೆ ಆತಂಕದ ನಡುವೆ ಸೆಪ್ಟೆಂಬರ್ 6ರಿಂದ 6ನೇ ತರಗತಿಯಿಂದ 8ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಶಾಲೆಗಳ ಓಪನ್ ಮತ್ತು ಗಣೇಶ್ ಹಬ್ಬದ ಆಚರಣೆ ಸಂಬಂಧ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ 6ರಿಂದ 8ನೇ ತರಗತಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದ್ದು ಅದರಂತೆ ವಾರದಲ್ಲಿ 5 ದಿನ ಮಾತ್ರ ಶಾಲೆಗಳು ನಡೆಯುತ್ತದೆ. ಇನ್ನುಳಿದ ಎರಡು ದಿನಗಳು ಶಾಲೆಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ನಡೆಯುತ್ತದೆ ಎಂದರು.
ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ತಾಲೂಕಿಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ. ಮಕ್ಕಳನ್ನು ಎರಡು ಬ್ಯಾಚ್ ಮಾಡಲಾಗುತ್ತದೆ. ಅದರಂತೆ ದಿನ ಬಿಟ್ಟು ದಿನ ಮಕ್ಕಳು ಶಾಲೆಗೆ ಹಾಜರಾಗಬೇಕಾಗುತ್ತದೆ.
ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 1 ವಾರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. 8ನೇ ದಿನ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ದಕ್ಣಿಣ ಕನ್ನಡ, ಹಾಸನ, ಕೊಡಗು ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ಇದೇ ಸಭೆಯಲ್ಲಿ ನಿರ್ಧರಿಸಲಾಗಿದೆ ಸಚಿವ ಅಶೋಕ್ ತಿಳಿಸಿದರು.
ಗಣೇಶ ಹಬ್ಬ ಆಚರಣೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲಾಗುವುದು. ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಕೂರಿಸುವ ಸಂಬಂಧ ಸ್ಥಳೀಯ ಪೊಲೀಸರಿಂದ ಮಾಹಿತಿ ಸಂಗ್ರಹಿಸಿ ಆಯೋಜಕರೊಂದಿಗ ಮಾತುಕತೆ ನಡೆಸಿದ ನಂತರ ಅನುಮತಿ ನೀಡಲಾಗುವುದು ಎಂದರು. ಸದ್ಯ ಗಣೇಶ ಹಬ್ಬ ಆಚರಣೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸೆ.5ರಂದು ಮತ್ತೊಂದು ಸಭೆ ನಡೆಸಲಾಗುವುದು ಈ ವೇಳೆ ಗಣೇಶೋತ್ಸವ ಸಂಬಂಧ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.