ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಸೆ.5 ರ ವರೆಗೆ ಭಾರೀ ಮಳೆ- ಹವಾಮಾನ ಇಲಾಖೆ

ಉಡುಪಿ ಸೆ.3(ಉಡುಪಿ ಟೈಮ್ಸ್ ವರದಿ): ಕರಾವಳಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆ.5 ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.  

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!