ಉಡುಪಿ: ಸೆ.3 ಮತ್ತೆ ಏರಿಕೆಯಾದ ಕೊರೊನಾ ಸೋಂಕು
ಉಡುಪಿ ಸೆ.3 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ.
ಜಿಲ್ಲೆಯಲ್ಲಿ ಇಂದು 150 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 87, ಕುಂದಾಪುರ 29, ಕಾರ್ಕಳ 33 ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,413 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಕೋವಿಡ್ ನಿಂದ ಯಾರೂ ಕೂಡಾ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 266ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೆ.2 ರಂದು ಜಿಲ್ಲೆಯಲ್ಲಿ 145 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 48,955 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 74,245 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 72,376 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.2 ರ ವೇಳೆಗೆ ಜಿಲ್ಲೆಯಲ್ಲಿ 6,25,513 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 50,634 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.