ಹಿಂಬಾಗಿಲ ಮೂಲಕ ಅಧಿಕಾರ ಹಿಡಿದ ಯಡಿಯೂರಪ್ಪರನ್ನು ಈಗ ಬಿಜೆಪಿಯೇ ಮನೆಗೆ ಕಳುಹಿಸಿದೆ- ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಸೆ.7: ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದ ಯಡಿಯೂರಪ್ಪ ಅವರನ್ನು ಈಗ ಬಿಜೆಪಿ ಯವರೇ ಮನೆಗೆ ಕಳುಹಿಸಿದ್ದಾರೆ ಎಂದು ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೃಷ್ಣಭೈರೇಗೌಡ ಅವರು ಆಯೋಜಿಸಿದ್ದ ದಿನಸಿ ಕಿಟ್ ವಿತರಣೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು,ಯಡಿಯೂರಪ್ಪ ಅವರ ಕೈ ಜೋಡಿಸಿದ್ದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿರುವುದರಿಂದ ನಾವು ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿ ದ್ದಾರೆ. ಜನ ವಾಸ್ತವತೆ ಅರ್ಥಮಾಡಿಕೊಳ್ಳಬೇಕು ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಎಲ್ಲದಕ್ಕೂ ಕೊರೊನಾ ನೆಪ ಹೇಳಿ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದ ಅವರು, ಕೊರೊನಾ ನಿರ್ವಹಣೆಗಾಗಿ 5 ರಿಂದ 6 ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಉಳಿದ ಎಲ್ಲ ಯೋಜನೆಗಳನ್ನೂ ಸ್ಥಗಿತಗೊಳಿಸಿದ್ದಾರೆ. 1.45 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನು ಕೇಳಿದರೂ ಕೊರೊನಾ ಎಂದು ನೆಪ ಹೇಳುತ್ತಾರೆ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

error: Content is protected !!