ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ರತನ್ ಶೆಟ್ಟಿ ನೇಮಕ
ಕಾಪು: ಕ್ಷೇತ್ರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅವರು ರತನ್ ಶೆಟ್ಟಿ ಇವರನ್ನು ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ.
ರತನ್ ಶೆಟ್ಟಿಯವರು ಶಿರ್ವ ಗ್ರಾಮ ಪಂಚಾಯತ್ ನ ಸದಸ್ಯರಾಗಿ ಸತತ 3ನೇ ಬಾರಿ ಆಯ್ಕೆಯಾಗಿದ್ದು, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿರುತ್ತಾರೆ. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೊಸ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದ ಇವರು ಶಿರ್ವ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಲು ಪ್ರಮುಖ ಪಾತ್ರ ವಹಿಸಿದ್ದರು.