ಮಣಿಪಾಲ- ಅಲೆವೂರುನಲ್ಲಿ ಸುಲಿಗೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ
ಮಣಿಪಾಲ ಸೆ.11(ಉಡುಪಿ ಟೈಮ್ಸ್ ವರದಿ): ಮಣಿಪಾಲ ಮತ್ತು ಉಡುಪಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರ ಸೆ.19ರಂದು ಬೈಕ್ ಸವಾರರಿಗೆ ಹಲ್ಲೆ ನಡೆಸಿ ಹಣ ಮತ್ತು ಮೊಬೈಲ್ ಫೋನ್ ಗಳನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಮುಕ್ಸೀನ್ (29) ಬಂಧಿತ ಆರೋಪಿ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಯನ್ನು ಕೈಗೆತ್ತಿಕೊಂಡ ಪೊಲೀಸರು ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆರೋಪಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಬೆಳ್ಳಾರೆ, ಪಣಂಬೂರು, ಹಾಸನ ಜಿಲ್ಲೆಯ ಸಕಲೇಶಪುರ, ಬೆಂಗಳೂರಿನ ಆರ್.ಟಿ ನಗರ, ಉಡುಪಿ ಜಿಲ್ಲೆಯ ಉಡುಪಿ ನಗರ, ಮತ್ತು ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಸುಮಾರು 20 ಕ್ಕೂ ಹೆಚ್ಚು ಕಳ್ಳತನ ಮತ್ತು ಸುಲಿಗೆಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿರುತ್ತವೆ.
ಈ ಕಾರ್ಯಚರಣೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸುಧಾಕರ್ ನಾಯ್ಕ್ ರವರ ಮಾಗದರ್ಶನದಂತೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ, ಪೊಲೀಸ್ ಉಪನಿರೀಕ್ಷಕ ರಾಜಶೇಖರ್ ವಂದಲಿ ಮತ್ತು ಸುಧಾಕರ್ ತೋನ್ಸೆ ಹಾಗೂ ಸಿಬ್ಬಂಧಿಗಳಾದ ಎ.ಎಸ್.ಐ ಶೈಲೇಶ್ ಕುಮಾರ್, ಪ್ರಸನ್ನ, ಇಮ್ರಾನ್, ತೋಮ್ಸನ್, ಅಬ್ದುಲ್ ರಜಾಕ್, ಪಿ.ಸಿ ಸುರೇಶ್, ಸಲ್ಮಾನ್ ಖಾನ್, ಲೋಕೇಶ್, ಸುದೀಪ್ ಮತ್ತು ಆದರ್ಶ ಭಾಗವಹಿಸಿದ್ದರು