ಮತಾಂತರ ಮತ್ತು ಅಕ್ರಮ ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ, ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಅಕ್ರಮ ಗೋ ಸಾಗಾಟನ್ನು ಸಹಿಸಲಾಗುವುದಿಲ್ಲ.

ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ರಮ ಮತಾಂತರ ಮತ್ತು ಗೋ ಕಳ್ಳತನ, ಆಕ್ರಮ ಗೋ ಸಾಗಾಟವನ್ನು ಬಿಜೆಪಿ ಅಥವಾ ಹಿಂದೂ ಸಂಘಟನೆಗಳು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗೋ ಹಂತಕರು ಮತ್ತು ಮತಾಂತರವನ್ನೇ ಕಾಯಕ ವನ್ನಾಗಿಸಿಕೊಂಡಿರುವ ಸಮಾಜ ಘಾತುಕ ಶಕ್ತಿಗಳು ಎಚ್ಚರ ವಹಿಸುವುದು ಒಳಿತು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!