ಚಿಕ್ಕಬಳ್ಳಾಪುರ: ಲಾರಿ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ – 6 ಮಂದಿ ಸಾವು

ಚಿಕ್ಕಬಳ್ಳಾಪುರ: ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಡಿಗೋಳ್ ಕ್ರಾಸ್ ನಿಂದ ಚಿಂತಾಮಣಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ಜೀಪ್ ಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!