ವಾಯುಭಾರ ಕುಸಿತ- ದ.ಕ, ಉಡುಪಿ ಸಹಿತ ಆರು ಜಿಲ್ಲೆಗೆ ಸೆ.15ರ ವರೆಗೆ ಯೆಲ್ಲೋ ಅಲರ್ಟ್

ಉಡುಪಿ, ಸೆ.12: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.15ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆ.15ರ ತನಕ ಮಳೆ ಮುಂದುವರೆಯಲಿದೆ.
ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆ ಕಂಡು ಬಂದಿದೆ. ಸೆಪ್ಟೆಂಬರಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈನಲ್ಲಿ ಶೇ.7ರಷ್ಟು, ಆಗಸ್‌ಟ್‌ನಲ್ಲಿ ಶೇ.24ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಆದರೆ ಈಗ ಅತೀಯಾದ ಮಳೆಯಾದರೆ ಭತ್ತ, ಹತ್ತಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳು ಕಟಾವು ಬರುವ ಸಮಯ ರೈತರು ಬಹಳಷ್ಟ್ಟು ಸಮಸ್ಯೆ ಅನುಭವಿಸ ಬೇಕಾಗುತ್ತದೆ.

Leave a Reply

Your email address will not be published. Required fields are marked *

error: Content is protected !!