ಉಡುಪಿ: 87 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- 1,501 ಸಕ್ರಿಯ ಪ್ರಕರಣ
ಉಡುಪಿ ಸೆ.12(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 87 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 49, ಕುಂದಾಪುರ 20, ಕಾರ್ಕಳ 14 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,501 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಇಂದು 69 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 269 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.11ರಂದು ಜಿಲ್ಲೆಯಲ್ಲಿ 58 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,746 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,127 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 73,167 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.11 ರ ವೇಳೆಗೆ ಜಿಲ್ಲೆಯಲ್ಲಿ 6,78,912 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 51,516 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.