ಕಾರ್ಕಳ: ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ ಸೆ.13: ಉಪನ್ಯಾಸಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ರವಳನಾಥ ಶರ್ಮಾ (32) ಆತ್ಮಹತ್ಯೆ ಮಾಡಿಕೊಂಡವರು.ಇವರು, ಎಂಬಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ಜೊತೆಗೆ ಇವರು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಅರ್ಚಕರಾಗಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!