ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ

ಮಂಗಳೂರು, ಸೆ13 (ಉಡುಪಿ ಟೈಮ್ಸ್ ವರದಿ): ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಮತ್ತು ಪ್ರಭಾವಿ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 

ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಮಂಗಳೂರಿನ ಯೇನಪೊಯ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಆಸ್ಕರ್ ಫೆರ್ನಾಂಡಿಸ್, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದರು. ಗಾಂಧಿ ಕುಟುಂಬದ ಆಪ್ತರಾಗಿದ್ದ ಇವರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಪ್ರಭಾವಿ ನಾಯಕರಲ್ಲಿ ಓರ್ವರಾಗಿದ್ದರು.

ಉಡುಪಿಯಿಂದ ರಾಜಕೀಯ ಜೀವನವನ್ನು ಆರಂಭಿಸಿದ ಅವರು ಬಳಿಕ ಹಂತ ಹಂತವಾಗಿ ಉನ್ನತ ಸ್ಥಾನಕ್ಕೇರಿದ್ದರು. ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಪುತ್ರ ಓಶಾನ್, ಪುತ್ರಿ ಓಶಾನಿ, ಅಳಿಯ ಮಾರ್ಕ್, ಸೊಸೆ ಫ್ರೆಜಿಲ್ ಮತ್ತು ಕುಟುಂಬಸ್ಥರು ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

15 thoughts on “ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ

  1. ಅವರೊಬ್ಬ ಮಹಾನ್ ನಾಯಕರಾಗಿದ್ದರು. ಸರಳ ಸಜ್ಜನಿಕೆಯ ರಾಜಕಾರಣಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.

  2. A great humane Osker Fernandes , loss to common people and Congress party. Sincere, hardworking, listening to poor and voiceless is no more.
    Iam sad to hear that.Great soul rest in peace.
    Heartfelt condolences to his family and the near and dear ones.
    May the God Almighty give strength and courage to family members to bear the loss.

    V.S.Roy David,
    CORD, Kushalnagar

Leave a Reply

Your email address will not be published. Required fields are marked *

error: Content is protected !!