ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟ: ಡಿಕೆಶಿ
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿ, ಆಸ್ಕರ್ ಅವರೊಂದಿಗೆ ನಾಲ್ಕು ದಶಕಗಳ ರಾಜಕೀಯ ಒಡನಾಟವಿತ್ತು. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದ ಆಸ್ಕರ್ ಕೇಂದ್ರ ಹೆದ್ದಾರಿ ಸಚಿವರಾಗಿದ್ದಾಗ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿದರು. ಕಾರ್ಮಿಕ ಸಚಿವರಾಗಿದ್ದಾಗ ಇಎಸ್ಐ ಆಸ್ಪತ್ರೆಗಳನ್ನು ಮೆಡಿಕಲ್ ಕಾಲೇಜುಗಳಾಗಿ ಬದಲಾಯಿಸಿ, ಕಾರ್ಮಿಕರ ಮಕ್ಕಳು ಉಚಿತವಾಗಿ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಮಾಡಿಕೊಟ್ಟರು. ಕಾರ್ಮಿಕ ಇಲಾಖೆಗೆ ಬಲ ತುಂಬುವುದರ ಜತೆಗೆ ಅಗತ್ಯ ಮೂಲಸೌಕರ್ಯ ಒದಗಿಸಿದರು. ಕರಾವಳಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ದೊಡ್ಡದು ಎಂದರು.
ಕಾಂಗ್ರೆಸ್ನಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದರು.
ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಶಾಸಕರಾದ ಯು ಟಿ ಖಾದರ್, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ಅಭಯಚಂದ್ರ ಜೈನ್ ಪ್ರಮುಖರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಯು.ಆರ್.ಸಭಾಪತಿ, ಮಿಥುನ್ ರೈ, ಜೆ ಆರ್ ಲೋಬೊ, ಮೊಯ್ದಿನ್ ಬಾವಾ, ಗೋಪಾಲ ಪೂಜಾರಿ, ಸುರೇಶ್ ಶೆಟ್ಟಿ ಗುರ್ಮೆ, ದಿನೇಶ್ ಪುತ್ರನ್, ಕೃಷ್ಣಮೂರ್ತಿ ಆಚಾರ್ಯ, ಸದಾಶಿವ ಕಟ್ಟೆಗುಡ್ಡೆ, ಹರೀಶ್ ಕಿಣಿ, ರೊನಾಲ್ಡ್ ಮನೋಹರ್ ಕರ್ಕಡ, ವೆರೋನಿಕಾ ಕರ್ನೇಲಿಯೋ, ರೋಶನಿ ಒಲಿವೆರಾ, ಡಾ. ಸುನೀತ, ನಾಗೇಶ್ ಕುಮಾರ್ ಉದ್ಯಾವರ, ಜಿತೇಂದ್ರ ಫುರ್ಟಾಡೊ,