ಉಡುಪಿ: 57 ಮಂದಿಯಲ್ಲಿ ಕೋವಿಡ್ ಸೋಂಕು ದೃಢ

ಉಡುಪಿ ಸೆ.14 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 57 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 37, ಕುಂದಾಪುರ 11, ಕಾರ್ಕಳ 8 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,559 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಯಾರೂ ಕೂಡ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 269 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.13 ರಂದು ಜಿಲ್ಲೆಯಲ್ಲಿ 12 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,820 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,259 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 73,241 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಸೆ.13 ರ ವೇಳೆಗೆ ಜಿಲ್ಲೆಯಲ್ಲಿ 6,88,805 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ  51,648 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. 

Leave a Reply

Your email address will not be published. Required fields are marked *

error: Content is protected !!