ಉಡುಪಿ: ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ನೇಣು ಬಿಗಿದು ಆತ್ಮಹತ್ಯೆ

ಉಡುಪಿ,ಸೆ.15(ಉಡುಪಿ ಟೈಮ್ಸ್ ವರದಿ): ತಮ್ಮ ಕಣ್ಣುಗಳನ್ನು ದಾನ ಮಾಡುವಂತೆ ಪತ್ರ ಬರೆದು ನೇಣು ಬಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಉಡುಪಿಯ ಕುಕ್ಕಿಕಟ್ಟೆಯಲ್ಲಿ ನಡೆದಿದೆ. 

ಆಶಾ ಶೆಟ್ಟಿ (48) ಆತ್ಮಹತ್ಯೆ ಮಾಡಿಕೊಂಡವರು. ಇವರು ಯಾವುದೋ ವಿಚಾರಕ್ಕೆ ಸಂಬಂಧಿಸಿ ತಮ್ಮ ವಾಸದ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗದಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದು ಬಂದಿದೆ. ಮೃತರ ಬಳಿ ಮರಣ ಪತ್ರ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ, ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ನಗರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!