ಉಡುಪಿ: 89 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- ಮಹಿಳೆಯ ಸಾವು
ಉಡುಪಿ ಸೆ.15 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 89 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 47, ಕುಂದಾಪುರ 14, ಕಾರ್ಕಳ 28 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,526 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಉಡುಪಿಯ 67 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 270 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.14 ರಂದು ಜಿಲ್ಲೆಯಲ್ಲಿ 121 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 49,941 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,348 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 73,362 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2 ನೇ ಅಲೆಯಲ್ಲಿ ಸೆ.14 ರ ವೇಳೆಗೆ ಜಿಲ್ಲೆಯಲ್ಲಿ 6,94, 370 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 51,737ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ