ಉಡುಪಿ: 93 ಮಂದಿಯಲ್ಲಿ ಕೋವಿಡ್ ಸೋಂಕು ದೃಢ
ಉಡುಪಿ ಸೆ.17(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 93 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಪೈಕಿ ಉಡುಪಿಯಲ್ಲಿ 48, ಕುಂದಾಪುರ 18, ಕಾರ್ಕಳ 27 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,516 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.
ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 270 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.16 ರಂದು ಜಿಲ್ಲೆಯಲ್ಲಿ 202 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 50,157 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,554 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 73,578 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2 ನೇ ಅಲೆಯಲ್ಲಿ ಸೆ.16 ರ ವೇಳೆಗೆ ಜಿಲ್ಲೆಯಲ್ಲಿ 7,08,548 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 51,943 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.