86 ಮಂದಿಯಲ್ಲಿ ಕೋವಿಡ್ ಸೋಂಕು ದೃಢ-ಉಡುಪಿಯ ಇಬ್ಬರು ಮಹಿಳೆಯರ ಸಾವು
ಉಡುಪಿ ಸೆ.18(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 86 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 61, ಕುಂದಾಪುರ 19, ಕಾರ್ಕಳ 5 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,399 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಉಡುಪಿಯ ಇಬ್ಬರು ಮಹಿಳೆಯರು ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 272 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೆ.17 ರಂದು ಜಿಲ್ಲೆಯಲ್ಲಿ 201 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 50,358 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,640 ಕೋವಿಡ್ ಪಾಸಿಟಿವ್ ಪ್ರಕರಣ ಗಳಲ್ಲಿ 73,779 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.17 ರ ವೇಳೆಗೆ ಜಿಲ್ಲೆಯಲ್ಲಿ 7,14,864 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 52,029 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ