ಉಡುಪಿ: 84 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- ಕಾರ್ಕಳದ ಇಬ್ಬರು ವ್ಯಕ್ತಿಗಳ ಸಾವು
ಉಡುಪಿ ಸೆ.19(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈ ವರೆಗಿನ ಕೊರೋನಾ ಅಂಕಿ ಅಂಶಗಳು ಹೀಗಿವೆ.
ಜಿಲ್ಲೆಯಲ್ಲಿ ಇಂದು 84 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 47, ಕುಂದಾಪುರ 18, ಕಾರ್ಕಳ 19 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,249 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಕಾರ್ಕಳದ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 274 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೆ.18 ರಂದು ಜಿಲ್ಲೆಯಲ್ಲಿ 232 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 50,590 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,724 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 74,011 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2 ನೇ ಅಲೆಯಲ್ಲಿ ಸೆ.18 ರ ವೇಳೆಗೆ ಜಿಲ್ಲೆಯಲ್ಲಿ 7,22,871 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 52,113 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.