ಫೇಸ್ ಬುಕ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಯೋಧರಿಗೆ ಭಾರತೀಯ ಸೇನೆ ಸೂಚನೆ
ನವದೆಹಲಿ: ಕೇಂದ್ರ ಸರ್ಕಾರ ಚೀನಾದ 59 ಆ್ಯಪ್’ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳಿಗೆ ಫೇಸ್’ಬುಕ್, ಇನ್’ಸ್ಟಾಗ್ರಾಮ್ ಸೇರಿ 89 ಆ್ಯಪ್ ಗಳನ್ನು ಜು.15ರೊಳಗೆ ಡಿಲೀಟ್ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮಗವನ್ನು ಜಾರಿಗೊಳಿಸಲಾಗಿದೆ. ಆದೇಶ ಪಾಲಿಸದಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನ ಮತ್ತು ಚೀನಾ ಗುಪ್ತಚರ ಸಂಸ್ಥೆಗಳು ಆನ್’ಲೈನ್ ನಲ್ಲಿ ಸೇನೆಯ ಮಾಹಿತಿ ಕದಿಯಲು ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎನ್ನಲಾಗುತ್ತಿದೆ.
Good decision. Intelligence Buros of China and Pakistan are trying to steel the Defence forces information, so that Central government orders for the safe guard of the Nation and the people appreciated. God bless you all.