ವೈದ್ಯಕೀಯ ಕಿಟ್ ಖರೀದಿ ಅವ್ಯವಹಾರ, ದಾಖಲೆ ನಿರಾಣಿ ಪೆನ್‌ಡ್ರೈವ್‌ನಲ್ಲಿದೆ: ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರದ ದಾಖಲೆ ನಿಮ್ಮದೇ ಪಕ್ಷದ ಮಾಜಿ ಸಚಿವ, ಹಾಲಿ ಶಾಸಕ ಮುರುಗೇಶ್ ನಿರಾಣಿಯವರ ಬಳಿಯಿರುವ ಪೆನ್‌ಡ್ರೈವ್‌ನಲ್ಲಿ ಇದೆಯಂತೆ. ಅದನ್ನು ಪಡೆದುಕೊಳ್ಳಿ ಎಂದು ವಿಪಕ್ಷ ನಾಯಕ‌ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಕೊರೊನಾ ಕಿಟ್ ಖರೀದಿಯಲ್ಲಿ ಸರ್ಕಾರ ಭ್ರಷ್ಟಾಚಾರವೆಸಗಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ್ದ  ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಕೆಲ ಬಿಜೆಪಿ ನಾಯಕರು ಸಿದ್ದರಾಮಯ್ಯ ದಾಖಲೆ ನೀಡಲಿ ಎಂದು ಸವಾಲು ಹಾಕಿದ್ದರು.

Leave a Reply

Your email address will not be published. Required fields are marked *

error: Content is protected !!