ಉಡುಪಿ: ಕೋವಿಡ್ ಸೋಂಕಿಗೆ ನಾಲ್ವರ ಬಲಿ- ಮೂರಂಕಿಯಿಂದ ಇಳಿದ ಸಕ್ರಿಯ ಪ್ರಕರಣ
ಉಡುಪಿ ಸೆ.20(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 63 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 32, ಕುಂದಾಪುರ 13, ಕಾರ್ಕಳ 17 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 953 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕಾರ್ಕಳದ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಮತ್ತು ಉಡುಪಿಯ ಇಬ್ಬರು ಮಹಿಳೆಯರು ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 2 ನೇ ಅಲೆಯಲ್ಲಿ ಒಟ್ಟು 278 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೆ.19 ರಂದು ಜಿಲ್ಲೆಯಲ್ಲಿ 355 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 50,945 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 75,787 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 74,366 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಸೆ.19 ರ ವೇಳೆಗೆ ಜಿಲ್ಲೆಯಲ್ಲಿ 7,27847 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 52,176ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.