ಉಡುಪಿ: 34 ಪಾಸಿಟಿವ್, ರಾಜ್ಯದಲ್ಲಿ ಒಂದೇ ದಿನ 1004 ಮಂದಿ ಡಿಸ್ಚಾರ್ಜ್
ಉಡುಪಿ: ಶುಕ್ರವಾರ 34 ಜನರಿಗೆ ಕೊರೋನಾ ಪಾಸಿಟಿವ್ ಧೃಢವಾಗಿದೆ. ಇವರೆಗೆ 1477 ಮಂದಿಗೆ ಸೋಂಕು ಧೃಢಪಟ್ಟಿದ್ದು, ಇಂದು 673 ಮಂದಿಯ ವೈದ್ಯಕೀಯ ವರದಿಯಲ್ಲಿ ನೆಗೆಟಿವ್ ಬಂದಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 544ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 29 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 57 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1447 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2313 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,418ಕ್ಕೇರಿಕೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ ಒಂದೇ ದಿನ 1004 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 472 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.