ಸೌದಿಯ ಜಿಜಾನ್‌ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ

ಕೈರೋ ಅ.11: ಸೌದಿಯ ದಕ್ಷಿಣ ನಗರದ ಜಿಜಾನ್‌ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದ ಮೇಲೆ ಸ್ಫೋಟಕಗಳು ತುಂಬಿದ ಡ್ರೋನ್ ದಾಳಿ ನಡೆಸಲಾಗಿದ್ದು ವಿವಿಧ ದೇಶದ ಪ್ರಜೆಗಳಿಗೆ ಗಾಯವಾಗಿದೆ.

ಈ ಬಗ್ಗೆ ಸೌದಿ ನೇತೃತ್ವದ ಒಕ್ಕೂಟದ ವಕ್ತಾರರು ಮಾಹಿತಿ ನೀಡಿರುವುದಾಗಿ ಸುದ್ದಿ ಸಂಸ್ಥೆ(ಎಸ್ಪಿಎ) ಯೊಂದು ವರದಿ ಮಾಡಿದೆ.
ಘಟನೆಯಲ್ಲಿ10 ಜನ ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದ್ದು ಈ ಪೈಕಿಆರು ಮಂದಿ ಸೌದಿ ಪ್ರಜೆಗಳು, ಮೂವರು ಬಾಂಗ್ಲಾದೇಶಿ ಪ್ರಜೆಗಳು ಮತ್ತು ಓರ್ವ ಸುಡಾನ್ ಪ್ರಜೆ ಗಾಯಗೊಂಡಿದ್ದಾರೆ. ದಾಳಿಯಲ್ಲಿ ವಿಮಾನ ನಿಲ್ದಾಣದ ಕೆಲವು ಮುಂಭಾಗದ ಕಿಟಕಿಗಳು ಸಹ ಛಿದ್ರಗೊಂಡಿವೆ ಎಂದು ಒಕ್ಕೂಟದ ವಕ್ತಾರರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ  ಹೌತಿಗಳು ಯಾವುದೇ ಹೊಣೆಗಾರಿಕೆ ಹೊತ್ತುಕೊಂಡಿಲ್ಲ. ಆದರೆ ಹೌತಿ ಬಂಡುಕೋರರ ಗುಂಪು ನಿಯಮಿತವಾಗಿ ಗಲ್ಫ್ ಸಾಮ್ರಾಜ್ಯವನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!