ಕನ್ನಡದ ಹಿರಿಯ ನಟ ಹಾಗೂ ರಂಗಕರ್ಮಿ ಪ್ರೊ.ಜಿ.ಕೆ ಗೋವಿಂದ ರಾವ್ ನಿಧನ

ಹುಬ್ಬಳ್ಳಿ ಅ.15: ಕನ್ನಡದ ಹಿರಿಯ ನಟ ಹಾಗೂ ರಂಗಕರ್ಮಿ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ.

84 ವರ್ಷದ ಪ್ರೊ. ಜಿ.ಕೆ ಗೋವಿಂದ ರಾವ್ ಅವರು ಇಂದು ಬೆಳಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಪ್ರೊ. ಜಿ.ಕೆ. ಗೋವಿಂದ ರಾವ್ ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇವರು ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ,ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ವೃತ್ತಿಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿ ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಅಭಿನಯಿಸಿದ್ದರು. 

Leave a Reply

Your email address will not be published. Required fields are marked *

error: Content is protected !!