ಅ.17 ರಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ: ಬೃಹತ್ ರಕ್ತದಾನ ಶಿಬಿರ

ಉಡುಪಿ ಅ.16(ಉಡುಪಿ ಟೈಮ್ಸ್ ವರದಿ): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಜನ್ಮ ದಿನದ ಅಂಗವಾಗಿ ಅ.17 ರಂದು ಬೃಹತ್ ರಕ್ತದಾನ ಶಿಬಿರವನ್ನು ನಗರದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ನಡೆಯುತ್ತಿರುವ ಈ ಬೃಹತ್ ರಕ್ತದಾನ ಶಿಬಿರವು ಅ.17 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆಯಲಿದೆ. 

ಬೆಳಿಗ್ಗೆ 10.30 ಕ್ಕೆ ನಡೆಯಲಿರುವ ಸಭೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜನಾರ್ದನ ತೋನ್ಸೆ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನಕರ ಹೇರೂರು ಉಪಸ್ಥಿತರಿರಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!