ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್’ಗೆ ಡೆಂಗ್ಯೂ- ಆರೋಗ್ಯ ಸ್ಥಿತಿ ಸುಧಾರಣೆ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

89 ವರ್ಷದ ಕಾಂಗ್ರೆಸ್ ನಾಯಕನಿಗೆ ಬುಧವಾರ ಸಂಜೆ ಜ್ವರ ಮತ್ತು ಆಯಾಸ ಕಾಣಿಸಿಕೊಂಡಿದ್ದರಿಂದ ಏಮ್ಸ್‌ಗೆ ದಾಖಲಿಸಲಾಗಿತ್ತು.

‘ಸಿಂಗ್‌ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಆದರೆ, ಅವರ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಏರಿಕೆ ಕಾಣಿಸುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ’ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!