ಡಿಕೆಶಿ ಪ್ರತಿಜ್ಞಾ ದಿನ: 3 ಶಾಸಕರಿಗೆ ಕೊರೋನಾ, ಕೆಪಿಸಿಸಿ ಕಚೇರಿ ಸೀಲ್ ಡೌನ್!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ಆಯೋಜಿಸಿದ್ದ ವಿಶೇಷ ಪ್ರತಿಜ್ಞಾ ದಿನ ಕಾರ್ಯಕ್ರಮ ಹಲವರ ಪಾಲಿಗೆಕಂಟಕವಾಗಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಶಾಸಕರಾದ ಜೇವರ್ಗಿ ಅಜಯ್ ಸಿಂಗ್, ಶೃಂಗೇರಿ ರಾಜೇಗೌಡ ಮತ್ತು ಹುಬ್ಬಳ್ಳಿ-ಧಾರವಾಡದ ಅಬ್ಬಯ್ಯ ಪ್ರಸಾದ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಇದೀಗ ಕೆಪಿಸಿಸಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದ್ದು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ, ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಸಕ ಅಜಯ್ ಸಿಂಗ್ ಬುಧವಾರ ತಾವೇ ಹೋಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಸಹೋದರ ಎಂಎಲ್ ಸಿ ವಿಜಯ್ ಸಿಂಗ್ ಕೂಡ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಎಚ್.ಕೆ ಪಾಟೀಲ್, ಬಿಕೆ ಹರಿಪ್ರಸಾದ್, ವಿಎಸ್ ಉಗ್ರಪ್ಪ, ಮತ್ತು ರಮೇಶ್ ಕುಮಾರ್ ಭಾಗವಹಿಸಿದ್ದರು.   ಹೀಗಾಗಿ ಅವರೆಲ್ಲಾ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಕುಣಿಗಲ್ ಶಾಸಕ ಡಾ ರಂಗನಾಥ್ ಶಿವಕುಮಾರ್ ಸಂಬಂಧಿಯಾಗಿದ್ದು, ಪ್ರತಿಜ್ಞಾ ದಿನ ಕಾರ್ಯಕ್ರಮದ ಪ್ರಮುಖ ಆಯೋಜಕರಾಗಿದ್ದರು, ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹರಿ ಪ್ರಸಾದ್, ಎಚ್ ಕೆ ಪಾಟೀಲ್ ಮತ್ತು ಉಗ್ರಪ್ಪ ಕೂಡ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ, ಜೊತೆಗೆ ಕೆಪಿಸಿಸಿ ಕಚೇರಿಯ 50 ಸಿಬ್ಬಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು ನಾಲ್ವರಿಗೆ ಪಾಸಿಟಿವ್ ಬಂದಿದೆ.

Leave a Reply

Your email address will not be published. Required fields are marked *

error: Content is protected !!