ಕಾರ್ಕಳ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ

ಕಾರ್ಕಳ ಅ.18 (ಉಡುಪಿ ಟೈಮ್ಸ್ ವರದಿ): ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಸಬಾ ಗ್ರಾಮದ ಪೆರ್ವಾಜೆಯಲ್ಲಿ ನಡೆದಿದೆ.

ಕಿಶೋರ (26) ಆತ್ಮಹತ್ಯೆ ಮಾಡಿಕೊಂಡವರು. ಇವರು ಅ.17 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಕಾರ್ಕಳದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಕಿಶೋರ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಿಶೋರ ಅವರು ಯಾವುದೋ ಕಾರಣದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಸಂತ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ.. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ.. ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್.ಎಸ್.ಆರ್ ಸೆಕ್ಟರ್- 4, ಬೆಂಗಳೂರು

Leave a Reply

Your email address will not be published. Required fields are marked *

error: Content is protected !!