ಉಡುಪಿ: ಒಂದಂಕಿಗೆ ಇಳಿದ ಕೋವಿಡ್ ಪಾಸಿಟಿವ್ – 44 ಸಕ್ರಿಯ ಪ್ರಕರಣ

ಉಡುಪಿ ಅ.18(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಹಾಗೂ ಪ್ರತಿ ದಿನ ಪತ್ತೆಯಾಗುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಪ್ರಮಾಣವೂ ಇಳಿಮುಖವಾಗಿದೆ.

ಜಿಲ್ಲೆಯಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 2, ಕುಂದಾಪುರದಲ್ಲಿ ಓರ್ವರಲ್ಲಿ  ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 44 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಯಾರೂ ಕೂಡ ಕೋವಿಡ್ ನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈ ವರೆಗೆ 2ನೇ ಅಲೆಯಲ್ಲಿ ಒಟ್ಟು 285 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಅ.17 ರಂದು ಜಿಲ್ಲೆಯಲ್ಲಿ 33 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 52,649 ಮಂದಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 76,589ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 76,070 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ 2ನೇ ಅಲೆಯಲ್ಲಿ ಅ.17 ರ ವೇಳೆಗೆ ಜಿಲ್ಲೆಯಲ್ಲಿ 8,17,595 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 52,978 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ಜಿಲ್ಲೆಯಲ್ಲಿ ಒಂದು ಬ್ಲ್ಯಾಕ್ ಫಂಗಸ್ ನ ಪ್ರಕರಣ ಸಕ್ರಿಯ ವಾಗಿದೆ. ಈ ವರೆಗೆ ಪತ್ತೆಯಾದ 53 ಬ್ಲ್ಯಾಕ್ ಫಂಗಸ್ ನ ಪ್ರಕರಣಗಳಲ್ಲಿ 46 ಮಂದಿ ಗುಣಮುಖರಾಗಿದ್ದು,6 ಮಂದಿ ಮೃತಪಟ್ಟಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 214 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 83 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,501ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 488 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,527ಕ್ಕೆ ಏರಿಕೆಯಾಗಿದೆ. ಇನ್ನು 9,164 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 77,901 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 214 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.27ಕ್ಕೆ ಇಳಿದಿದೆ. ರಾಜ್ಯದ 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ.

Leave a Reply

Your email address will not be published. Required fields are marked *

error: Content is protected !!