ಚೆಕ್ ನಗದು ಅವಧಿ ವಿಸ್ತರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಚೆಕ್ ಳಿಗಿರುವ ಮೂರು ತಿಂಗಳ ಅವದಿಯನ್ನು ವಿಸ್ತರಣೆ ಮಾಡಲು ಸಾಧ್ಯವಾಗದು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಕೊರೋನಾ ಸೋಂಕಿನ ಕಾರಣ ಕಳೆದ ಮೂರು ತಿಂಗಳಿಗಿಂತ ಹೆಚ್ಚು ಲಾಕ್ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚೆಕ್ ಗಳಿಗಿರುವ ಮೂರು ತಿಂಗಳು ಅವದಿಯನ್ನು ಹೆಚ್ಚು ಮಾಡಬೇಕು ಎಂಬ ಒತ್ತಾಯ ಎಲ್ಲ ಕಡೆಯಿಂದ ಕೇಳಿ ಬಂದಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು.
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಪ್ರಕಾರ ಚೆಕ್ ಗಳಿಗೆ ಮೂರು ತಿಂಗಳ ಅವಧಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದೆ. ಚೆಕ್ ನೀಡಿದ ಮೂರು ತಿಂಗಳ ಒಳಗೆ ಅದನ್ನು ನಗದಿಕರಿಸಿಕೊಳ್ಳಬೇಕು. ಇಲ್ಲದಿದ್ದರೇ ಅದು ರದ್ದಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳುತ್ತದೆ. ಲಾಕ್ಡೌನ್ ಕಾರಣಕ್ಕೆ ಚೆಕ್ ಗಳ ಅವಧಿಯನ್ನು ವಿಸ್ತರಿಸುವುದರಿಂದ ಬ್ಯಾಂಕಿಂಗ್ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದೂ ಸುಪ್ರೀಂಕೋರ್ಟ್ ಹೇಳಿದೆ.