| ಸಿಂದಗಿ ಅ.29: ದಯವಿಟ್ಟು ನಳೀನ್ ಕುಮಾರ್ ಕಟೀಲ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವರಿಷ್ಠರಿಗೆ ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಹುಲ್ ಗಾಂಧಿ ಬಗ್ಗೆ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ.
ಜವಾಬ್ದಾರಿ ಸ್ಥಾನದಲ್ಲಿರುವವರು ಇಂಥಹ ಮಾತುಗಳನ್ನಾಡಲು ಸಾಧ್ಯವೇ? ನಳೀನ್ ಕುಮಾರ್ ಕಟೀಲ್ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ತರಹ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಹಾಗಾಗಿ ದಯವಿಟ್ಟು ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಆಸ್ಪತ್ರೆಗೆ ಸೇರಿಸಬೇಕು. ಈ ಬಗ್ಗೆ ನಾನು ಜೆ.ಪಿ. ನಡ್ಡಾ ಹಾಗೂ ಅಮಿತ್ ಶಾ ಅವರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಮೊದಲು ಕಟೀಲ್ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಿ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ರಾಹುಲ್ ಗಾಂಧಿ ಡ್ರಗ್ ಪೆಡ್ಲರ್. ಇದು ನಾನು ಹೇಳ್ತಾ ಇಲ್ಲ ಮಾಧ್ಯಮಗಳೇ ಇದನ್ನು ಹೇಳುತ್ತಿವೆ. ಇತಂಹ ರಾಹುಲ್ ಗಾಂಧಿಗೆ ಪಕ್ಷವನ್ನು ಸಂಭಾಳಿಸಲು ಆಗುತ್ತಿಲ್ಲ. ಸೋನಿಯಾ ಗಾಂಧಿಗೂ ಆಗುತ್ತಿಲ್ಲ. ಇತಂಹವರು ನಮ್ಮ ಪ್ರಧಾನಿ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
| |