ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಮಹಾಸಭೆ
ಉಡುಪಿ: ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಕೇವಲ ಒಂದು ಚಿತ್ರದ ಮೂಲಕ ಬಿಂಬಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಫೋಟೋಗ್ರಾಫರ್ಸ್ ಸಮಾಜದ ದೃಷ್ಠಿಕೋನವನ್ನು ಅರ್ಥೈಸಿ ಕೊಂಡು ಧನಾತ್ಮಕ ಚಿತ್ರ ತೆಗೆಯಲು ಪ್ರಯತ್ನಿಸಬೇಕು ಎಂದು ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ. ವಿಜಯ ಬಲ್ದಾಳ್ ತಿಳಿಸಿದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಸಹಯೋಗದಲ್ಲಿ ರವಿವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ವೇದಿಕೆಯಲ್ಲಿ ಆಯೋಜಿಸಿದ್ದ 31ನೇ ವಾರ್ಷಿಕ ಮಹಾಸಭೆಯನ್ನು ಉದ್ಭಾಟಸಿ ಅವರು ಮಾತನಾಡಿದರು. ಶಾಸಕ ಕೆ.ರಘುಪತಿ ಭಟ್ ಅವರು ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಿದರು. ಕ್ರೀಡಾಕೂಟ ಹಾಗು ಛಾಯಾಚಿತ್ರ, ವಿಡಿಯೋಗ್ರಫಿ ಸ್ಪರ್ಧೆಯಲ್ಲಿ ವಿಜೇತರಿಗೆ ಅಭಿನಂದಿಸಲಾಯಿತು 14 ವಲಯಗಳ ಪದಗ್ರಹಣ ನೆರವೇರಿಸಲಾಯಿತು ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು ಇವರಿಗೆ ಗೌರವ ಸಲ್ಲಿಸಲಾಯಿತು. ಛಾಯಾಚಿತ್ರ ಪರಿಕರಗಳ ಮಳಿಗೆ ಹಾಗು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಜತೆಗೆ ಹಿರಿಯ ಹಿರಿಯ ಫೋಟೋಗ್ರಾಫರ್ಸ್ ಗಳನ್ನು ಸಮ್ಮಾನಿಸಿದರು. ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ. ಪರಮೇಶ್ ಸುಬ್ಬಯ್ಯ, ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರಸಂಘದ ಅಧ್ಯಕ್ಷ ಕೆ. ವಾಸುದೇವ ರಾವ್, ಅಸೋಸಿಯೇಶನ್ ಉಪಾಧ್ಯಕ್ಷ ನಾಗರಾಜ ರಾಯಪ್ಪನ ಮಠ, ಪ್ರ. ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್., ಸಲಹಾ ಸಮಿತಿ ಸದಸ್ಯರು, ಸಂಘದ ಮಾಜಿ ಅಧ್ಯಕ್ಷರು, 14 ವಲಯಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಸ್ವಾಗತಿಸಿದರು. ರಾಘವೇಂದ್ರ, ಬಬಿತಾ ಕಾರ್ಯಕ್ರಮ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಗಿರಿ ವಂದಿಸಿದರು.