ಕೊಣಾಜೆ: ತಡರಾತ್ರಿ ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ

ಉಳ್ಳಾಲ, ಅ.19: ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ಬಿಜೆಪಿ ಕಾರ್ಯಕರ್ತರೊಬ್ಬರ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಪ್ರಕಾಶ್ ಶೆಟ್ಟಿ  ಅವರು ಸ್ನೇಹಿತ ಮಂಜುನಾಥ್ ಜೊತೆಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಈ ವೇಳೆ ಪ್ರಕಾಶ್ ಶೆಟ್ಟಿ ಅವರ ಕೈಗೆ ಮಾತ್ರ ಗಾಯವಾಗಿದ್ದು, ಅವರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಕಾಶ್ ಅವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಪ್ರತೀಕಾರವಾಗಿಯೇ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!