ಮಣಿಪಾಲ: ಬೈಕ್ ಕಳವು

ಮಣಿಪಾಲ ಅ.20(ಉಡುಪಿ ಟೈಮ್ಸ್ ವರದಿ): ನಿಲ್ಲಿಸಿದ್ದ ಬೈಕ್ ನ್ನು ಯಾರೋ ಕಳ್ಳರು ಕಳವು ಮಾಡಿ ಕೊಂಡು ಹೋಗಿರುವ ಘಟನೆ ಉಡುಪಿಯ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಬಗ್ಗೆ ಬೈಕ್ ಕಳೆದುಕೊಂಡ ಮಯೂರ್ ಎಮ್  ಶೇಟ್ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಮಯೂರ್ ಎಮ್  ಶೇಟ್ ಅವರು ಅ.16 ರಂದು ತಮ್ಮ ಬೈಕ್ ನ್ನು ತಮ್ಮ ಮನೆಯ ಪಕ್ಕದಲ್ಲಿರುವ ಅಜ್ಜನ ಮನೆಯಲ್ಲಿ ವಾಹನ ನಿಲ್ಲಿಸುವ ಜಾಗದಲ್ಲಿ ನಿಲ್ಲಿಸಿ ಹೋಗಿದ್ದರು. ಬಳಿಕ ಅ.19 ರಂದು ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಆದ ಕಾರಣ ನಿಲ್ಲಿಸಿದ್ದ ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!